• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲು ಅಂತಾರಾಷ್ಟ್ರೀಯ ಪಿತೂರಿ : ವಿ ಎಚ್ ಪಿ
National

ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲು ಅಂತಾರಾಷ್ಟ್ರೀಯ ಪಿತೂರಿ : ವಿ ಎಚ್ ಪಿ

CliQ INDIA
Last updated: August 9, 2025 9:40 am
CliQ INDIA
Share
3 Min Read
SHARE

ಬೆಂಗಳೂರು, 08 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯವಿದ್ದು, ಅದು ಭಾರತದ ಪ್ರತಿಷ್ಠಿತ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಪೈಕಿ ಒಂದಾಗಿದೆ. ಶ್ರೀ ಕ್ಷೇತ್ರಕ್ಕೆ ವರ್ಷವಿಡಿ ಜಗತ್ತಿನೆಲ್ಲೆಡೆಯಿಂದ ಕೋಟ್ಯಾಂತರ ಭಕ್ತರು ಆಗಮಿಸಿ ತಮ್ಮ ಆರಾಧ್ಯ ದೇವರ ದರ್ಶನವನ್ನು ಪಡೆಯುತ್ತಾರೆ. ಧಾರ್ಮಿಕ ಕಾರ್ಯಗಳೇ ಕಲಿಯುಗದ ಶ್ರೀರಕ್ಷೆ ಎಂಬ ದಿವ್ಯವಾಣಿಗೆ ಅನುಸಾರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳವು ಕಳೆದ ಹಲವು ದಶಕಗಳಿಂದ ಸಹಸ್ರಾರು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ, ನೂರಾರು ಧಾರ್ಮಿಕ ಕ್ಷೇತ್ರಗಳನ್ನು ಜೀರ್ಣೋದ್ದಾರಗೊಳಿಸುತ್ತಾ ಧರ್ಮ ದಾಸೋಹಕ್ಕೆ ಸಾಕ್ಷಿಯಾಗಿದೆ. ಇಷ್ಟು ಮಾತ್ರವಲ್ಲದೇ ಅಕ್ಷರ ಹಾಗೂ ಅನ್ನದಾಸೋಹಕ್ಕೂ ಆಣಿಯಾಗಿ ನಿಂತಿದೆ. ಧರ್ಮಕ್ಕೆ ಪ್ರತಿರೂಪವಾಗಿರುವ ಧರ್ಮಸ್ಥಳಕ್ಕೆ ಇಂದು ಪಟ್ಟಬದ್ಧ ಹಿತಾಸಕ್ತಿಗಳು ಹಾಗೂ ಹಿಂದೂ ವಿರೋಧಿ ಶಕ್ತಿಗಳು ವ್ಯಾಪಕವಾಗಿ ಅಪಪ್ರಚಾರವೆಸಗುತ್ತಾ ಕ್ಷೇತ್ರದ ಗೌರವ ಹಾಗೂ ಘನತೆಯನ್ನು ಕುಗ್ಗಿಸಲು ಯತ್ನಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ವಿಶ್ವ ಹಿಂದು ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬೆಂಗಳೂರು ಪ್ರಾಂತ ಅಧ್ಯಕ್ಷ ದೀಪಕ್ ರಾಜ್ ಗೋಪಾಲ್ ಹಾಗೂ ನಿಕಟಪೂರ್ವ ಪ್ರಾಂತ ಅಧ್ಯಕ್ಷ ಡಾ ಎಂ ಬಿ ಪುರಾಣಿಕ್, ಬೆಳ್ತಂಗಡಿ ಪೋಲೀಸ್ ರಾಣೆ ವ್ಯಾಪ್ತಿಗೆ ಸೇರಿದ ಪ್ರದೇಶದಲ್ಲಿ 2012ರಲ್ಲಿ ನಡೆದ ಕುಮಾರಿ ಸೌಜನ್ಯಳ ಕ್ರೌರ್ಯಭರಿತ ಹತ್ಯೆಗೆ ಸಂಬಂಧಿಸಿ ಸಮಗ್ರವಾದ ಪಾರದರ್ಶಕ ತನಿಖೆ ನಡೆದು ಅಪರಾಧಿಗಳಿಗೆ ಕಠಿಣಾಧಿ ಕಠಿಣ ಶಿಕ್ಷೆಯಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸುತ್ತಲೇ ಬಂದಿದೆ. ಅಷ್ಟೇ ಅಲ್ಲದೆ ಅಂದಿನಿಂದಲೂ ಆ ನಿಟ್ಟಿನಲ್ಲಿ ನಡೆದ ಎಲ್ಲಾ ಪೂರ್ವಾಗ್ರಹರಹಿತ ಹೋರಾಟಗಳಿಗೆ ತನ್ನ ಬೆಂಬಲವನ್ನೂ ನೀಡಿದೆ. ಈ ನಡುವೆ ಇದೀಗ ಅನಾಮಿಕ ವ್ಯಕ್ತಿಯೊಬ್ಬ ತಾನು 10-20 ವರ್ಷಗಳ ಹಿಂದೆ ನೂರಾರು ಹೆಣಗಳನ್ನು ಧರ್ಮಸ್ಥಳದ ಕಾಡುಗಳಲ್ಲಿ ಹೂತಿದ್ದೇನೆ ಎಂಬ ಹೇಳಿಕೆಯನ್ನು ಆಧರಿಸಿ ಶ್ರೀ ಕ್ಷೇತ್ರದ ಘನತೆಗೆ ಹಾಗೂ ಹಿಂದೂ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಸಂಚನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಂದೂ ಧರ್ಮಕ್ಕೆ ಸೇರದ ಅನ್ಯಮತೀಯ ಸಂಘಟನೆಗಳ ಪ್ರಮುಖರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಾಹಿನಿ ನಡೆಸುವವರು ಧರ್ಮಸ್ಥಳದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವುದನ್ನು ನೋಡಿದಾಗ ಇದೊಂದು ಬಹು ದೊಡ್ಡ ಪಡ್ಯಂತ್ರವೆಂಬುದು ಕಂಡುಬರುತ್ತಿದೆ. ಮಾತ್ರವಲ್ಲದೇ ಇದನ್ನು ಅಂತರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಭಿತ್ತರಿಸುವ ಮೂಲಕ ಇದೊಂದು ಅಂತರಾಷ್ಟ್ರೀಯ ಮಟ್ಟದ ಪಿತೂರಿ ಎಂದು ಹಿಂದೂ ವಿರೋಧಿ ಶಕ್ತಿಗಳು ಸಾಬೀತು ಪಡಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಸಮಗ್ರ ತನಿಖೆಗೆ ಸರಕಾರಕ್ಕೆ ಆಗ್ರಹ : ರಾಜ್ಯ ಸರಕಾರವು ಎಸ್ಐಟಿ ಮೂಲಕ ತನಿಖೆಯನ್ನು ಮುಂದುವರಿಸುವಾಗ ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆ ಮತ್ತು ಹಿಂದೂ ಶ್ರದ್ಧೆ – ಭಾವನೆ ನಂಬಿಕೆಗಳಿಗೆ ಅಪಚಾರವಾಗದೇ ಇರುವ ರೀತಿಯಲ್ಲಿ ಎಚ್ಚರಿಕೆ ವಹಿಸುವಂತೆ ಹಾಗೂ ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತ್ರ ಮಾಡಿ ಸನಾತನ ಧರ್ಮದೊಳಗೆ ಬಿರುಕು ಮೂಡಿಸಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿ ಎಚ್ ಪಿ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ ನಿಲುವು ಸ್ಪಷ್ಟವಿದೆ, ಇತ್ತೀಚಿಗೆ ನಡೆಯುತ್ತಿರುವ ಎಲ್ಲಾ ಘಟನೆಗಳ ಸಮಗ್ರ ತನಿಖೆಯಾಗಬೇಕಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಆದರೆ ಧರ್ಮಸ್ಥಳದಂತಹ ಶ್ರದ್ಧಾಕೇಂದ್ರದ ಘನತೆ ಗೌರವಗಳಿಗೆ ಯಾವುದೇ ಹಾನಿಯಾಗಬಾರದು. ಧರ್ಮಸ್ಥಳ ಮಾತ್ರವಲ್ಲದೆ ರಾಜ್ಯ ಹಾಗು ದೇಶದ ಇನ್ನೂ ಆನೇಕ ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ಪಿತೂರಿ ಮಾಡುವ ಎಲ್ಲಾ ಅಹಿಂದ- ಅಂತಾರಾಷ್ಟ್ರೀಯ ಶಕ್ತಿಗಳ ವಿರುದ್ಧ ವಿಶ್ವ ಹಿಂದು ಪರಿಷತ್ ಎಲ್ಲಾ ರೀತಿಯ ಹೋರಾಟ ಮಾಡಲು ಸಿದ್ಧವಿದೆ ಎಂದು ಉಭಯ ನಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಮೋದಿ ಸಂವಾದ
ಪ್ರಧಾನ ಮಂತ್ರಿ ಭೇಟಿ ಮಾಡಿದ ನಿತೀಶ್ ಕುಮಾರ್
ಭಯೋತ್ಪಾದಕರ ಶೋಧ: ಬಸಂತ್‌ಗಢದಲ್ಲಿ ಗುಂಡಿನ ಚಕಮಕಿ
ಕೊನೆಯ ಹಂತದ ಲೋಕಸಭಾ ಚುನಾವಣೆ,ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನ | BulletsIn
ಷೇರುಪೇಟೆ ಕುಸಿತ: ನಿಫ್ಟಿ 21 ತಿಂಗಳ ಗರಿಷ್ಠ ಕುಸಿತ, ₹13 ಲಕ್ಷ ಕೋಟಿ ಸಂಪತ್ತು ನಾಶ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕಾನೂನು ಪದವೀಧರರಿಗೆ ತರಬೇತಿ ಭತ್ಯೆ : ಅರ್ಜಿ ಆಹ್ವಾನ
Next Article ರಾಯಚೂರು : ಮಧ್ಯಸ್ಥಗಾರಿಕೆ ಅಭಿಯಾನಕ್ಕೆ ನ್ಯಾ. ಹೆಚ್.ಎ. ಸಾತ್ವಿಕ್ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?