
ನವದೆಹಲಿ,19ನವೆಂಬರ್ (ಹಿ.ಸ):
ಆ್ಯಂಕರ್ :ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ನವೆಂಬರ್ ೨೨ ರಂದು ಜಿ-೨೦ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸೆಂಪ್ಟಂಬರ್ನಲ್ಲಿ ನವದೆಹಲಿಯಲ್ಲಿ ನಡೆದ ಭಾರತದ ಅಧ್ಯಕ್ಷತೆಯ ಜಿ-೨೦ ಸಮಾರಂಭದಲ್ಲಿ ಪ್ರಧಾನಿಯವರು, ವರ್ಚುವಲ್ ಮೂಲಕ ಸಮಾರೋಪ ಸಮಾರಂಭ ಆಯೋಜಿಸುವುದಾಗಿ ತಿಳಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಜಿ-೨೦ ರಾಷ್ಟ್ರಗಳ ನಾಯಕರು ಹಾಗೂ ಈ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವ ಆಫ್ರಿಕಾ ಒಕ್ಕೂಟದ ನಾಯಕರು ಪಾಲ್ಗೊಳ್ಳಲಿದ್ದಾರೆ. ೯ ಅತಿಥಿ ರಾಷ್ಟ್ರಗಳ ಅಂತಾರಾಷ್ಟ್ರೀಯ ಸಂಘಟನೆಗಳ ಪ್ರತಿನಿಧಿಗಳನ್ನು ಈ ಶೃಂಗಸಭೆಗೆ ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
