
ನಾಗ್ಪುರ್, 2 ಡಿಸೆಂಬರ್(ಹಿ.ಸ):
ಆ್ಯಂಕರ್ :
ನಾಗ್ಪುರದಲ್ಲಿಂದು ಬೆಳಗ್ಗೆ ನಡೆಯಲಿರುವ ರಾಷ್ಟ್ರ ಸಂತ ತುಕಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾಲಯದ ೧೧೧ನೇ ಘಟಿಕೋತ್ಸವ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಚಾನ್ಸಲರ್ ರಮೇಶ್ ಬೈಸ್ ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ಈ ಘಟಿಕೋತ್ಸವದಲ್ಲಿ ೧೨೯ ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗುತ್ತದೆ.
ಹಿಂದೂಸ್ತಾನ್ ಸಮಾಚಾರ್
