ನವದೆಹಲಿ, 2 ಡಿಸೆಂಬರ್(ಹಿ.ಸ):
ಆ್ಯಂಕರ್ :
ನಾಡಿದ್ದು ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವದೆಹಲಿಯಲ್ಲಿಂದು ಸರ್ವಪಕ್ಷ ಸಭೆ ಕರೆದಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಉಭಯ ಸದನಗಳ ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಂಸತ್ತಿನ ಉಭಯ ಸದನಗಳ ಕಲಾಪ ಸುಗಮವಾಗಿ ನಡೆಯಲು ಸರ್ಕಾರ ಪ್ರತಿ ಪಕ್ಷಗಳ ಸಹಾಯ ಮತ್ತು ಸಹಕಾರ ಕೋರಲಿದೆ. ಡಿಸೆಂಬರ್ ೪ ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ ೨೨ರ ವರೆಗೆ ನಡೆಯಲಿದೆ. ಒಟ್ಟು ೧೯ ದಿನಗಳಲ್ಲಿ ೧೫ ದಿನ ಕಲಾಪಗಳು ಜರುಗಲಿವೆ.
ಹಿಂದೂಸ್ತಾನ್ ಸಮಾಚಾರ್
