
ಪೂಂಚ್, 22 ಡಿಸೆಂಬರ್(ಹಿ.ಸ):
ಆ್ಯಂಕರ್ :
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸಂಜೆ ಸೇನಾ ಟ್ರಕ್ ಮೇಲೆ ಉಗ್ರರು ನಡೆಸಿದ ಹೊಂಚು ದಾಳಿಯಲ್ಲಿ ಹುತಾತ್ಮರಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಲಷ್ಕರ್-ಎ-ತೊಯ್ಬಾದ ಪಾಕಿಸ್ತಾನ ಮೂಲದ ಶಾಖೆಯಾದ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ಹೊಂಚುದಾಳಿಯ ಹೊಣೆ ಹೊತ್ತುಕೊಂಡಿದೆ.
ದಾಳಿಯಲ್ಲಿ ಹುತಾತ್ಮರಾದ ಯೋಧರ ಶಸ್ತ್ರಾಸ್ತ್ರಗಳನ್ನು ಉಗ್ರರು ತೆಗೆದುಕೊಂಡು ಹೋಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಈ ದಾಳಿಗೆ ಕೆಲವೇ ವಾರಗಳ ಮೊದಲು, ಸಮೀಪದ ರಾಜೌರಿ ಜಿಲ್ಲೆಯ ಬಾಜಿಮಲ್ ಅರಣ್ಯ ಪ್ರದೇಶದ ಧರ್ಮಸಾಲ್ ಬೆಲ್ಟ್ನಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಕ್ಯಾಪ್ಟನ್ಗಳು ಸೇರಿದಂತೆ ಐವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು.
ನವೆಂಬರ್ನಲ್ಲಿ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಅಫ್ಘಾನಿಸ್ತಾನದ ಉನ್ನತ ತರಬೇತಿ ಪಡೆದ ಲಷ್ಕರ್-ಎ-ತೈಬಾ (ಎಲ್ಇಟಿ) ಕಮಾಂಡರ್ ಕ್ವಾರಿ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್
