ಗಾಂಧಿನಗರ್,31ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಎರಡು ದಿನಗಳ ಭೇಟಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ ಅಂಭಾಜಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ ನಂತರ ಮೆಹಸಾನ್ದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಅಡಿಗಲ್ಲು ಹಾಕಲಿದ್ದಾರೆ. ನಂತರ ಕೇವಾಡಿಯದಲ್ಲಿ ನಿರ್ಮಾಣಗೊಂಡಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಮೂರ್ತಿಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ರಾಷ್ಟ್ರೀಯ ಏಕತಾ ದಿವಸದ ನಿಮಿತ್ತ ವಿವಿಧ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
