ದೆಹಲಿ, 4 ನವೆಂಬರ್ (ಹಿ.ಸ):
ಆ್ಯಂಕರ್ :
ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್ಡಮ್ ಪ್ರಧಾನಮಂತ್ರಿ ರಿಷಿ ಸುನಕ್ ಅವರೊಂದಿಗೆ ಮಾತುಕತೆ ನಡೆಸಿದರು. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ವಿಧಾನಗಳ ಬಗ್ಗೆ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಉಭಯ ನಾಯಕರು ಚರ್ಚಿಸಿದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಹಿತಿ ಹಂಚಿಕೊಂಡಿದ್ದಾರೆ. ಯುಕೆ ಪ್ರಧಾನಿಯೊಂದಿಗೆ ಮಾತನಾಡಿದ್ದೇನೆ ಮತ್ತು ಭಯೋತ್ಪಾದನೆ ಹಾಗೂ ಹಿಂಸಾಚಾರಕ್ಕೆ ಯಾವುದೇ ಆಸ್ಪದವಿಲ್ಲ. ಮತ್ತು ನಾಗರಿಕರ ಸಾವು ತೀವ್ರ ಆತಂಕ ಮೂಡಿಸುವಂತಾಗಿದೆ. ಇದು ನಿಜಕ್ಕೂ ಗಂಭೀರ ವಿಷಯ. ಇದನ್ನು ಅವರೂ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಾದೇಶಿಕ ಶಾಂತಿ, ಭದ್ರತೆ, ಸ್ಥಿರತೆ ಮತ್ತು ನಿರಂತರ ಮಾನವೀಯ ನೆರವಿಗಾಗಿ ಕೆಲಸ ಮಾಡುವ ಅಗತ್ಯದ ಬಗ್ಗೆ ರಿಷಿ ಸುನಕ್ ಮಾಹಿತಿ ಹಂಚಿಕೊಂಡರು ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
