ನವದೆಹಲಿ, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ಭೇಟಿ ನೀಡಿ, ಕೋಟ್ಯಂತರ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.
ಪ್ರಧಾನಿ ಮೊದಲು ಬಿಹಾರದ ಗಯಾಕ್ಕೆ ತೆರಳಲಿದ್ದು, ಅಲ್ಲಿ ಸುಮಾರು ₹13,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಎರಡು ಹೊಸ ರೈಲುಗಳನ್ನು ರಾಜ್ಯಕ್ಕೆ ಉಡುಗೊರೆಯಾಗಿ ನೀಡಲಿದ್ದಾರೆ. ಗಯಾ–ದೆಹಲಿ ಅಮೃತ್ ಭಾರತ್ ರೈಲು ಮತ್ತು ವೈಶಾಲಿ–ಕೋಡರ್ಮಾ ಬುದ್ಧ ಸರ್ಕ್ಯೂಟ್ ರೈಲು ಸೇವೆಯನ್ನು ಪ್ರಧಾನಿಯವರು ಆರಂಭಿಸಲಿದ್ದಾರೆ. ಇದಲ್ಲದೆ, ಗಂಗಾ ನದಿಯ ಮೇಲೆ ಬೇಗುಸರಾಯ್‌ನಲ್ಲಿ ನಿರ್ಮಿಸಲಾದ ಅಂತಾ–ಸಿಮಾರಿಯಾ ಸೇತುವೆಯನ್ನು ಉದ್ಘಾಟಿಸಲಿದ್ದಾರೆ.
ಸಂಜೆ 4 ಗಂಟೆಗೆ ಪಶ್ಚಿಮ ಬಂಗಾಳದ ಕೋಲ್ಕತ್ತಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಕೋಲ್ಕತ್ತಾ ಮೆಟ್ರೋ ಹೊಸ ವಿಭಾಗವನ್ನು ಉದ್ಘಾಟಿಸಿ ಸ್ವತಃ ಅದರಲ್ಲಿ ಪ್ರಯಾಣಿಸಲಿದ್ದಾರೆ. ನಂತರ, ಸುಮಾರು ₹5,200 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಇದೇ ವೇಳೆ ಪ್ರಧಾನಿಯವರು ಡಮ್ ಡಮ್ ಕ್ಯಾಂಟೋನ್ಮೆಂಟ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
