ನವದೆಹಲಿ, 30 ನವೆಂಬರ್ (ಹಿ.ಸ):
ಆ್ಯಂಕರ್ :
ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ಉದ್ಯೋಗಕ್ಕೆ ಸೇರ್ಪಡೆಗೊಂಡವರಿಗೆ ೫೧ ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಮಂತ್ರಿ ಈ ಸಂದರ್ಭದಲ್ಲಿ ನೇಮಕಗೊಂಡವರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ದೇಶಾದ್ಯಂತ ೩೭ ಸ್ಥಳಗಳಲ್ಲಿ ರೋಜ್ ಗರ್ ಮೇಳ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿ ನರೇಂದ್ರ ಮೋದಿಯವರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳ ಒಂದು ಹೆಜ್ಜೆಯಾಗಿದೆ.
ಹಿಂದೂಸ್ತಾನ್ ಸಮಾಚಾರ್
