ಚೆನ್ನೈ, 7 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮಿಚಾಂಗ್ ಚಂಡಮಾರುತದ ಪ್ರಭಾವಕ್ಕೆ ಒಳಗಾಗಿರುವ ತಮಿಳುನಾಡಿನ ಪ್ರವಾಹ ಬಾಧಿತ ಪ್ರದೇಶಗಳಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ತಮಿಳುನಾಡು ಸರ್ಕಾರದ ಹಣಕಾಸು ಸಚಿವ ಥಂಗಂ ಥೆನ್ನಾರಸು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಅವರಿಗೆ ಸಾಥ್ ನೀಡಲಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರೂ ಸಹ ರಕ್ಷಣಾ ಸಚಿವರ ಜತೆ ತೆರಳಲಿದ್ದಾರೆ. ವೈಮಾನಿಕ ಸಮೀಕ್ಷೆಯ ನಂತರ ರಾಜನಾಥ್ ಸಿಂಗ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಸಭೆ ನಡೆಸಲಿದ್ದು, ಮಿಚಾಂಗ್ ಚಂಡಮಾರುತದಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ಪರಿಹಾರ ಕಾರ್ಯಗಳು ಮತ್ತು ವಿವಿಧ ಸಂಸ್ಥೆಗಳ ರಕ್ಷಣಾ ಕಾರ್ಯದ ಕುರಿತು ಪರಾಮರ್ಶೆ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
