• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ; ಭಾರತ ಗಂಭೀರ ಕಳವಳ
National

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ; ಭಾರತ ಗಂಭೀರ ಕಳವಳ

CliQ INDIA
Last updated: December 26, 2025 11:35 pm
CliQ INDIA
Share
2 Min Read
SHARE

ನವದೆಹಲಿ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಾಂಗ್ಲಾದೇಶದಲ್ಲಿ ಹಿಂದೂಗಳು, ಕ್ರಿಶ್ಚಿಯನ್ನರು ಹಾಗೂ ಬೌದ್ಧರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರದ ನಿರಂತರ ಘಟನೆಗಳ ಕುರಿತು ಭಾರತ ಗಂಭೀರ ಕಳವಳ ವ್ಯಕ್ತಪಡಿಸಿದೆ. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆಯನ್ನು ವಿದೇಶಾಂಗ ಸಚಿವಾಲಯ ತೀವ್ರವಾಗಿ ಖಂಡಿಸಿದ್ದು, ಈ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳನ್ನು ಶೀಘ್ರ ನ್ಯಾಯಕ್ಕೆ ತರಲಾಗುತ್ತದೆ ಎಂಬ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ.

ಶುಕ್ರವಾರ ನಡೆದ ಸಾಪ್ತಾಹಿಕ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಬಾಂಗ್ಲಾದೇಶಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು. ನೆರೆಯ ದೇಶದಲ್ಲಿನ ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಹಾಗೂ ನಿಕಟವಾಗಿ ಗಮನಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳನ್ನು ಕೇವಲ ಮಾಧ್ಯಮಗಳ ಉತ್ಪ್ರೇಕ್ಷೆ ಅಥವಾ ಸಾಮಾನ್ಯ ರಾಜಕೀಯ ಹಿಂಸಾಚಾರವೆಂದು ತಳ್ಳಿಹಾಕಲಾಗುವುದಿಲ್ಲ ಎಂದು ವಕ್ತಾರರು ಹೇಳಿದರು.

ಮಧ್ಯಂತರ ಸರ್ಕಾರದ ಅವಧಿಯಲ್ಲಿ, ಸ್ವತಂತ್ರ ಮೂಲಗಳು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ 2,900ಕ್ಕೂ ಹೆಚ್ಚು ಹಿಂಸಾಚಾರದ ಘಟನೆಗಳು ನಡೆದಿರುವುದನ್ನು ದಾಖಲಿಸಿವೆ ಎಂದು ಅವರು ಉಲ್ಲೇಖಿಸಿದರು.

ಬಾಂಗ್ಲಾದೇಶದ ಕುರಿತು ಭಾರತದ ನಿಲುವು ಆರಂಭದಿಂದಲೂ ಸ್ಪಷ್ಟ ಮತ್ತು ಸ್ಥಿರವಾಗಿದೆ. ಬಾಂಗ್ಲಾದೇಶದ ಜನರೊಂದಿಗೆ ನಮ್ಮ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಭಾರತ ಬದ್ಧವಾಗಿದೆ. ನಾವು ಅಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತೇವೆ. ಶಾಂತಿಯುತ ವಾತಾವರಣದಲ್ಲಿ ನಡೆಯುವ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಮತ್ತು ಭಾಗವಹಿಸುವ ಚುನಾವಣೆಯನ್ನು ಭಾರತ ಬೆಂಬಲಿಸುತ್ತದೆ ಎಂದು ರಣಧೀರ್ ಜೈಸ್ವಾಲ್ ಹೇಳಿದರು.

17 ವರ್ಷಗಳ ಬಳಿಕ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶಕ್ಕೆ ಮರಳಿರುವ ವಿಚಾರವನ್ನು ಉಲ್ಲೇಖಿಸಿದ ವಕ್ತಾರರು, ಈ ಬೆಳವಣಿಗೆಯನ್ನು ಕೂಡಾ ಮುಕ್ತ ಮತ್ತು ನ್ಯಾಯಯುತ ಚುನಾವಣೆಯ ದೃಷ್ಟಿಕೋನದಲ್ಲಿಯೇ ನೋಡಬೇಕು ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ಬಾಂಗ್ಲಾದೇಶದಲ್ಲಿ ಹರಡಲಾಗುತ್ತಿರುವ ಸುಳ್ಳು ಭಾರತ ವಿರೋಧಿ ನಿರೂಪಣೆಯನ್ನು ಅವರು ತಿರಸ್ಕರಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ನಾಗರಿಕರ ಭದ್ರತೆಯನ್ನು ಖಚಿತಪಡಿಸುವುದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದೆ ಎಂದು ಅವರು ಪುನರುಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಅಯೋಧ್ಯೆ,2ನೇ ದಿನವೂ ಸೇರಿದ ಲಕ್ಷಾಂತರ ಭಕ್ತರು,ಸದ್ಯಕ್ಕೆ ಬರಬೇಡಿ- ಪೊಲೀಸರ ಮನವಿ
ಭಾರತದ ವಿರೋಧ ಪಕ್ಷದ ನಾಯಕ ವಿದೇಶ ಪ್ರವಾಸಕ್ಕೆ ಬಿಜೆಪಿಗೆ ಬೆಂಕಿ ಹಚ್ಚಿದ್ದಾರೆ, ಹಣಕಾಸು ಪ್ರಶ್ನೆಗಳು ಉದ್ಭವಿಸಿವೆ
ಗುಜರಾತ್ ಗೆ ಪ್ರಧಾನಿ ಮೋದಿ ಎರಡು ದಿನ ಪ್ರವಾಸ | BulletsIn
ಅಸ್ಸಾಂನಲ್ಲಿ 5.1 ತೀವ್ರತೆಯ ಭೂಕಂಪ ; ಈಶಾನ್ಯ ಭಾರತ ಹಾಗೂ ನೆರೆ ರಾಷ್ಟ್ರಗಳಲ್ಲಿ ಕಂಪನ
ನಾಳೆ ಛತ್ತೀಸ್‌ಗಢದ ಐದು ಹೊಸ ರೈಲು ನಿಲ್ದಾಣಗಳಿಗೆ ಪ್ರಧಾನಿ ಚಾಲನೆ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಅಪರೂಪದ ಸ್ನೇಹ, ಓರ್ವನ ಬೀಕರ ಕೊಲೆಯಲ್ಲಿ ಅಂತ್ಯ : ಬೆಚ್ಚಿ ಬಿದ್ದ ಜನತೆ
Next Article ರಾಯಚೂರು: ಪ್ರಬಂಧ ಸ್ಪರ್ಧೆ – ವಿದ್ಯಾರ್ಥಿಗಳಿಗೆ ಜಾಗೃತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?