ಪಾಟ್ನಾ, 11 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾಯಿತು. 20 ಜಿಲ್ಲೆಗಳ 122 ಸ್ಥಾನಗಳಿಗೆ ಸುಮಾರು 3.7 ಕೋಟಿ ಮತದಾರರು 1,302 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ರಾಜ್ಯದಲ್ಲಿ 45,399 ಮತಗಟ್ಟೆಗಳು ಸ್ಥಾಪಿತವಾಗಿದ್ದು, ಭದ್ರತೆಗೆ 4 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ. ಈ ಹಂತದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹಲವು ಸಚಿವರು ಹಾಗೂ ಪ್ರಮುಖ ನಾಯಕರು ಸ್ಪರ್ಧಿಸುತ್ತಿದ್ದಾರೆ.
ಮಹಾ ಮೈತ್ರಿಕೂಟ ಮತ್ತು ಎನ್‌ಡಿಎ ಮೈತ್ರಿಕೂಟಗಳ ನಡುವೆ ಬಿರುಸಿನ ಸ್ಪರ್ಧೆ ನಡೆಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
