ಪಾಟ್ನಾ, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಹಕ್ಕುಗಳ ಯಾತ್ರೆಯ ವೇಳೆ ಚುನಾವಣಾ ಆಯೋಗ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೇಖ್‌ಪುರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದುವರೆಗೂ ಚುನಾವಣೆಗಳನ್ನು ಮೋಸದಿಂದ ಗೆದ್ದಿದ್ದಾರೆ. ಒಂದು ದಿನ ಸತ್ಯ ಬಹಿರಂಗವಾಗುತ್ತದೆ. ನಮ್ಮ ಸರ್ಕಾರ ಬಂದರೆ ಚುನಾವಣಾ ಆಯೋಗದ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬಡವರಿಗೆ ಉಳಿದಿರುವುದು ಮತದಾನದ ಹಕ್ಕು ಮಾತ್ರ. ಅದನ್ನೂ ಬಿಜೆಪಿ ಕಸಿದುಕೊಳ್ಳಲು ಯತ್ನಿಸುತ್ತಿದೆ. ಮತ ಕಳೆದುಕೊಂಡರೆ, ಪಡಿತರ ಚೀಟಿ, ಭೂಮಿ, ಕೊನೆಗೆ ಉಳಿದಿರುವ ಎಲ್ಲವೂ ಕಳೆದುಹೋಗುತ್ತದೆ ಎಂದು ಆರೋಪಿಸಿದರು.
ಮಹಾರಾಷ್ಟ್ರದ ಉದಾಹರಣೆಯನ್ನು ನೀಡಿ, ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತು, ಆದರೆ ನಂತರ ನಡೆದ ವಿಧಾನ ಸಭಾ ಚುನಾವಣೆಯಲ್ಲಿ, ಚುನಾವಣಾ ಆಯೋಗದ ಸಹಾಯದಿಂದ ಬಿಜೆಪಿ ಮತ ಕಳ್ಳತನ ಮಾಡಿದೆ. ಬಿಹಾರದಲ್ಲಿಯೂ ಇದೇ ರೀತಿಯ ಅಕ್ರಮ ನಡೆಸಲು ಸಂಚು ರೂಪಿಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
