ನವದೆಹಲಿ, 07 ಜುಲೈ (ಹಿ.ಸ.) :
ಆ್ಯಂಕರ್ : ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಆಡಳಿತದ ಚೌಕಟ್ಟಿನಲ್ಲಿ ಸಮಗ್ರ ಸುಧಾರಣೆ ಮತ್ತು ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ನಿಲುವು ಅಗತ್ಯವಿದೆ ಎಂದು ಹೇಳಿದರು.
ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ವಿಶ್ವಬ್ಯಾಂಕ್, ಐಎಂಎಫ್ ಹಾಗೂ ವಿಶ್ವ ವ್ಯಾಪಾರ ಸಂಸ್ಥೆ ಗಳಲ್ಲಿ ತಕ್ಷಣದ ಸುಧಾರಣೆಯ ಅಗತ್ಯವಿದೆ ಎಂದು ಸಲಹೆ ನೀಡಿದರು. ಪಹಲ್ಗಾಮ್‌ನಲ್ಲಿ ಏಪ್ರಿಲ್ 2025 ರಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಉದಾಹರಿಸಿ, ಈ ತರ್ಕರಹಿತ ಕ್ರೂರತೆಗೆ ಹಣಕಾಸು, ಆಶ್ರಯ ಅಥವಾ ಪ್ರೋತ್ಸಾಹ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶೃಂಗಸಭೆಯ ಅಂತ್ಯದಲ್ಲಿ ‘ರಿಯೊ ಡಿ ಜನೈರೊ ಘೋಷಣೆ’ ಅಂಗೀಕರಿಸಲಾಯಿತು. ಈ ಘೋಷಣೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಸಹಕಾರ, ಜಾಗತಿಕ ಸಂಸ್ಥೆಗಳ ಸುಧಾರಣೆ ಮತ್ತು ಭಯೋತ್ಪಾದನೆಯ ವಿರುದ್ಧ ಬಲಿಷ್ಠ ನಿಲುವುಗಳನ್ನು ಹೊಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
