ದೆಹಲಿ, 14 ಜನವರಿ(ಹಿ.ಸ):
ಆ್ಯಂಕರ್ :
ಇಸ್ಲಾಮಾಬಾದ್ನಲ್ಲಿರುವ ಬ್ರಿಟೀಷ್ ಹೈಕಮಿಷನರ್ ಅವರು, ಈ ತಿಂಗಳ ೧೦ ರಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನೀಡಿರುವ ಅತ್ಯಂತ ಆಕ್ಷೇಪಾರ್ಹ ಭೇಟಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ. ಇದು ಭಾರತದ ಸಾರ್ವಭೌಮತೆ ಮತ್ತು ಭೌಗೋಳಿಕ ಸಮಗ್ರತೆ ವಿಚಾರದ ಉಲ್ಲಂಘನೆಯಾಗಿದ್ದು, ಇದು ಸ್ವೀಕಾರಾರ್ಹವಲ್ಲ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ. ಈ ಭೇಟಿ ಕುರಿತು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಮ್ಮು – ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಎಂದಿಗೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯುತ್ತವೆ ಎಂದು ಸಚಿವಾಲಯ ಈ ಸಂದರ್ಭದಲ್ಲಿ ಒತ್ತಿ ಹೇಳಿದೆ.
ಹಿಂದೂಸ್ತಾನ್ ಸಮಾಚಾರ್
