
ಮಹಬೂಬ್ ನಗರ, 6 ಜನವರಿ(ಹಿ.ಸ):
ಆ್ಯಂಕರ್ :
ತೆಲಂಗಾಣದ ಮಹಬೂಬ್ನಗರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಓರ್ವ ಮಗು ಕೂಡ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಬಾಲನಗರದಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಅಪಘಾತ ನಡೆದಿದೆ. ಆಟೋರಿಕ್ಷಾ ಮತ್ತು ಬೈಕ್ಗೆ ಲಾರಿಯೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಡಿಸೆಂಬರ್ 25 ರಂದು ಇದೇ ಜಾಗದಲ್ಲಿ ಅಪಘಾತ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದರು.
ಹಿಂದೂಸ್ತಾನ್ ಸಮಾಚಾರ್
