
ಭೂಪಾಲ್ , 28 ನವೆಂಬರ್ (ಹಿ.ಸ):
ಆ್ಯಂಕರ್ :
ಮಧ್ಯಪ್ರದೇಶದಲ್ಲಿ ಮತ ಎಣಿಕೆಗಾಗಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಡಳಿತಗಳು ಇವಿಎಂಗಳು ಮತ್ತು ಸ್ಟ್ರಾಂಗ್ ರೂಂಗಳ ಭದ್ರತೆಗೆ ಮತ್ತು ಸಂಪೂರ್ಣ ಎಣಿಕೆ ಪ್ರಕ್ರಿಯೆಯ ಪಾರದರ್ಶಕತೆಗೆ ಗಮನ ಹರಿಸಿವೆ. ಡಿಸೆಂಬರ್ ೩ ರಂದು ಬೆಳಿಗ್ಗೆ ೮ ಗಂಟೆಗೆ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ.ಈ ಮಧ್ಯೆ, ಮಧ್ಯಪ್ರದೇಶ ಮುಖ್ಯ ಚುನಾವಣಾಧಿಕಾರಿ ಕಛೇರಿಯ ಹಿರಿಯ ಅಧಿಕಾರಿಗಳು ರಾಜ್ಯದಲ್ಲಿ ವಿವಿಧ ಮತ ಎಣಿಕೆ ಕೇಂದ್ರಗಳನ್ನು ಪರಿಶೀಲಿಸುತ್ತಿದ್ದಾರೆ.ಭೋಪಾಲ್, ವಿಧಿಶಾ, ರೈಸೇನ್, ಇಂದೋರ್, ಸಹೋರ್ ಮತ್ತು ದೇವಾಸ್ ನಲ್ಲಿ ಮತ ಎಣಿಕೆ ಕೇಂದ್ರಗಳ ಪರಿಶೀಲನೆ ನಡೆಸಿದ ನಂತರ ಮುಖ್ಯ ಚುನಾವಣಾಧಿಕಾರಿ ಅನುಪಮ್ ರಾಜನ್ ಎಣಿಕೆ ಕುರಿತ ಸನ್ನದ್ಧತೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಸ್ಟ್ರಾಂಗ್ ರೂಂನ ಭದ್ರತಾ ಸಿದ್ಧತೆಗಳ ಕುರಿತ ಮಾಹಿತಿಯನ್ನು ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಮತ್ತು ಅಧಿಕಾರಿಗಳಿಗೆ ನೀಡಲಾಗಿದೆ. ಸಿಸಿಟಿವಿ ಕ್ಯಾಮೆರಾಗಳ ಮೂಲಕ ಸಂಪೂರ್ಣ ಪ್ರಕ್ರಿಯೆಯ ನಿಗಾ ವಹಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಎಣಿಕಾ ಕೇಂದ್ರಗಳ ಆವರಣಗಳ ಮುಖ್ಯ ಪ್ರವೇಶದ್ವಾರದ ಸಮೀಪ ನೇರ ಪ್ರಸಾರಕ್ಕಾಗಿ ಎಲ್ಇಡಿ ಪರದೆಗಳನ್ನು ಅಳವಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ನಮ್ಮ ಹಿಂದೂಸ್ತಾನ್ ಸಮಾಚಾರ್ ವರದಿಗಾರ ವರದಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
