ಭೂಪಾಲ್, 13ಡಿಸೆಂಬರ್(ಹಿ.ಸ):
ಆ್ಯಂಕರ್ :
ಮಧ್ಯಪ್ರದೇಶದಲ್ಲಿ ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮತ್ತಿತರಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಬೆಳಗ್ಗೆ ೧೧.೩೦ಕ್ಕೆ ಭೋಪಾಲ್ನ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಇತರ ಅಧಿಕಾರಿಗಳು, ಕೇಂದ್ರ ಸಚಿವರು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಜೊತೆಗೆ ಕೆಲವು ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ನಮ್ಮ ಪ್ರತಿನಿಧಿ ವರದಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
