ನವದೆಹಲಿ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಮಲೇಷ್ಯಾ ಆಸಿಯಾನ್ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಅನ್ವರ್ ಇಬ್ರಾಹಿಂ ಅವರನ್ನು ಅಭಿನಂದಿಸಿದ್ದಾರೆ.
ಮುಂಬರುವ ಆಸಿಯಾನ್ ಶೃಂಗಸಭೆಗಳ ಯಶಸ್ಸಿಗೆ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಆಸಿಯಾನ್–ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ, ಆಸಿಯಾನ್–ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
