
ಹಲ್ದ್ವಾನಿ, 25ಅಕ್ಟೋಬರ್ (ಹಿ.ಸ):
ಆ್ಯಂಕರ್ :ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಅವರು ಪ್ರಯಾಣಿಸುತ್ತಿದ್ದ ಕಾರು ಬುಧವಾರ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಅವರ ಎದೆಗೆ ಪೆಟ್ಟು ಬಿದ್ದಿದೆ. ಆರಂಭಿಕ ವರದಿಗಳ ಪ್ರಕಾರ, ಹಲ್ದ್ವಾನಿಯಿಂದ ಕಾಶಿಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಧಿಕಾರಿಗಳ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಾವತ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್ಒ) ಮತ್ತು ಇತರ ಸಹಚರರಿಗೂ ಗಾಯಗಳಾಗಿವೆ. ಅವರ ಕೈ ಮತ್ತು ತಲೆಗೆ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.ತಕ್ಷಣವೇ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ವೈದ್ಯರು ಸಿಟಿ ಸ್ಕ್ಯಾನ್ ಮತ್ತು ಇತರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದರು, ನಂತರ ಅವರು ರಾವತ್ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ರಾವತ್ ಅವರು ಪತ್ರಿಕಾಗೋಷ್ಠಿಗಾಗಿ ಕಾಶಿಪುರಕ್ಕೆ ತೆರಳುತ್ತಿದ್ದರು, ರಾವತ್ಗೆ ಗಂಭೀರ ಗಾಯಗಳಾಗಿದ್ದು, ಅವರ ಚಾಲಕ ಮತ್ತು ಗನ್ನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
