
ನವದೆಹಲಿ, 4 ಡಿಸೆಂಬರ್(ಹಿ.ಸ):
ಆ್ಯಂಕರ್ :
ಇಂದು ಮಿಜೋರಾಂ ವಿಧಾನಸಭಾ ಚುನಾವಣೆ ಯ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದೆ. ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ತೆಲಂಗಾಣ ನಂತರ ಈಗ ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಸರದಿಯಾಗಿದೆ. ಮಿಜೋರಾಂನಲ್ಲಿ ಮತ ಎಣಿಕೆಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಬಾರಿ ಮಿಜೋ ನ್ಯಾಷನಲ್ ಫ್ರಂಟ್ , ಝೋರಾಮ್ ಪೀಪಲ್ಸ್ ಮೂವ್ಮೆಂಟ್ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಯನ್ನು ನಿರೀಕ್ಷಿಸಲಾಗಿದೆ.
18 ಮಹಿಳೆಯರು ಸೇರಿದಂತೆ ಒಟ್ಟು 174 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಮತದಾನ ನಡೆದಿತ್ತು. ರಾಜ್ಯದ 8.57 ಲಕ್ಷ ಮತದಾರರಲ್ಲಿ 80 ಪ್ರತಿಶತಕ್ಕೂ ಹೆಚ್ಚುಅಭ್ಯರ್ಥಿಗಳನ್ನು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ , ಝೋರಾಮ್ ಪೀಪಲ್ಸ್ ಮೂವ್ಮೆಂಟ್ ಮತ್ತು ಕಾಂಗ್ರೆಸ್ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಬಿಜೆಪಿ 13 ಸ್ಥಾನಗಳಲ್ಲಿ ನಿಲ್ಲಿಸಿದೆ. ಮಿಜೋರಾಂನಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ (ಎಎಪಿ) ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಇದಲ್ಲದೇ 17 ಸ್ವತಂತ್ರ ಅಭ್ಯರ್ಥಿಗಳ ಭವಿಷ್ಯ ಕೂಡ ನಿರ್ಧಾರವಾಗಲಿದೆ.
ಬಿಗಿ ಭದ್ರತೆಯ ನಡುವೆ ಎಲ್ಲಾ 13 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ ಎಂದು ಮಿಜೋರಾಂನ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಎಚ್ ಲಿಯಾಂಜೆಲ್ಲಾ ತಿಳಿಸಿದ್ದಾರೆ. 40 ವಿಧಾನಸಭಾ ಸ್ಥಾನಗಳಿಗೆ 13 ಕೇಂದ್ರಗಳಲ್ಲಿ ತಲಾ ಒಂದು ಮತ ಎಣಿಕೆ ಸಭಾಂಗಣ ನಿರ್ಮಿಸಲಾಗಿದೆ. ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ ನಡೆಯಲಿದ್ದು, ಬೆಳಗ್ಗೆ 8.30ರಿಂದ ಇವಿಎಂಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ.
ಹಿಂದೂಸ್ತಾನ್ ಸಮಾಚಾರ್
