ನವದೆಹಲಿ, 22 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಭಾರತದ ಚುನಾವಣಾ ಆಯೋಗವು ಅಕ್ಟೋಬರ್ 22 ಮತ್ತು 23ರಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳ ಎರಡು ದಿನಗಳ ಸಮ್ಮೇಳನ ಆರಂಭವಾಗಿದೆ
ಈ ಸಮ್ಮೇಳನವು ನವದೆಹಲಿಯ ದ್ವಾರಕಾದಲ್ಲಿರುವ ಇಂಡಿಯಾ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಟೋರಲ್ ಮ್ಯಾನೇಜ್ಮೆಂಟ್ ನಲ್ಲಿ ನಡೆಯುತ್ತಿದೆ. ಮುಖ್ಯ ಚರ್ಚೆ ವಿಷಯವಾಗಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಕುರಿತ ಪ್ರಕ್ರಿಯೆಗಳು ಮತ್ತು ಅನುಷ್ಠಾನದ ಪರಿಣಾಮಕಾರಿತ್ವ ಮತ್ತು ಪಾರದರ್ಶಕತೆ ಹೆಚ್ಚಿಸಲು ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ವಿವರವಾದ ಚರ್ಚೆ ನಡೆಯಲಿದೆ.
ಅಧಿಕಾರಿಗಳ ಹೇಳಿಕೆ ಪ್ರಕಾರ, ತಮ್ಮ ರಾಜ್ಯಗಳಲ್ಲಿ ನಡೆದ ಅನುಭವಗಳು ಮತ್ತು ಸವಾಲುಗಳನ್ನು ಹಂಚಿಕೊಳ್ಳಲು ಅವಕಾಶ ನೀಡಲಾಗಿದೆ. ವಿಶೇಷವಾಗಿ, ಬಿಹಾರದಲ್ಲಿ ಎಸ್ಐಆರ್ ಯಶಸ್ವಿಯಾಗಿ ಪೂರ್ಣಗೊಂಡ ನಂತರ, ಈ ವಿಧಾನವನ್ನು ದೇಶದಾದ್ಯಂತ ಜಾರಿಗೆ ತರುವ ಬಗ್ಗೆ ಆಯೋಗ ಚರ್ಚಿಸುತ್ತಿದ್ದು, ಅದಕ್ಕಾಗಿ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
