ನವದೆಹಲಿ, 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆಕೆಎಲ್‌ಎಫ್) ಭಯೋತ್ಪಾದಕ ಯಾಸಿನ್ ಮಲಿಕ್ ನೀಡಿದ ಪ್ರಮಾಣಪತ್ರ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ನೀತಿಗಳನ್ನು ಪ್ರಶ್ನಿಸಿದೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, “ಯಾಸಿನ್ ಮಲಿಕ್ ಒಬ್ಬ ಕುಖ್ಯಾತ ಭಯೋತ್ಪಾದಕ. ಭಾರತೀಯ ವಾಯುಪಡೆಯ ಸಿಬ್ಬಂದಿಯನ್ನು ಹತ್ಯೆ ಮಾಡಿದ ಅಪರಾಧಿ. ಅಂತಹ ವ್ಯಕ್ತಿಯನ್ನು ಯಾವುದೇ ಸಂದರ್ಭದಲ್ಲೂ ಬಿಡಲಾಗುವುದಿಲ್ಲ. ಅಂದಿನ ಯುಪಿಎ ಸರ್ಕಾರವು ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸಿದ ಪ್ರಶ್ನೆಗಳಿಗೆ ಉತ್ತರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.
ಅವರು, ಯಾಸಿನ್ ಮಲಿಕ್ ಹೇಳಿಕೆ ನಿಜವಾಗಿದ್ದರೆ, ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮಟ್ಟದಲ್ಲಿ ಭಯೋತ್ಪಾದಕರಿಗೆ ಧನ್ಯವಾದ ಹೇಳಲಾಯಿತು ಎಂಬ ಸಂಗತಿ ಕಾಂಗ್ರೆಸ್‌ನ ಭಯೋತ್ಪಾದನೆ ನೀತಿ ಹಾಗೂ ಪಾಕಿಸ್ತಾನದ ವಿರುದ್ಧದ ಹೋರಾಟದ ಬಗ್ಗೆಯೂ ಗಂಭೀರ ಪ್ರಶ್ನೆ ಎತ್ತುತ್ತದೆ ಎಂದು ಟೀಕಿಸಿದ್ದಾರೆ.
ಯಾಸಿನ್ ಮಲಿಕ್ ಇತ್ತೀಚೆಗೆ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ ಪ್ರಮಾಣಪತ್ರ ದಲ್ಲಿ, 2006ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್ ಅವರನ್ನು ಭಾರತೀಯ ಗುಪ್ತಚರ ಸಂಸ್ಥೆಗಳ ನಿರ್ದೇಶನದ ಮೇರೆಗೆ ಭೇಟಿಯಾದೆ ಮತ್ತು ನಂತರ ಪ್ರಧಾನಿ ಮನಮೋಹನ್ ಸಿಂಗ್ ಧನ್ಯವಾದ ಅರ್ಪಿಸಿದ್ದರು ಎಂದು ಹೇಳಿಕೊಂಡಿದ್ದ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
