ಜೈಪುರ,25ನವೆಂಬರ್ (ಹಿ.ಸ):
ಆ್ಯಂಕರ್ :
: ಪಂಚ ರಾಜ್ಯ ಚುನಾವಣೆ ಭಾಗವಾಗಿರುವ ಹಾಗೂ ಬಿಜೆಪಿ-ಕಾಂಗ್ರೆಸ್ ನಡುವಿನ ಪ್ರತಿಷ್ಠೆಯ ಸವಾಲಾಗಿರುವ ಮಹತ್ವದ ರಾಜಸ್ಥಾನದ ವಿಧಾನಸಭೆ ಚುನಾವಣೆ ಇಂದು ನಡೆಯುತ್ತಿದೆ. 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಇಂದು ಚುನಾವಣೆ ಮತದಾನ ಆರಂಭವಾಗಿದೆ. ಕರಣ್ಪುರ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕರು ಹಾಗೂ ಅಭ್ಯರ್ಥಿಯಾಗಿದ್ದ ಗುರ್ಮಿತ್ ಸಿಂಗ್ ನಿಧನರಾದ ಕಾರಣ ಆ ಕ್ಷೇತ್ರದಲ್ಲಿ ಮತದಾನ ಮುಂದೂಡಿಕೆ ಆಗಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. 1863 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, 5.27 ಕೋಟಿ ಜನ ಮತದಾರರಿದ್ದು ಇಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಡಿ.3ರಂದು ಮತ ಎಣಿಕೆ ನಡೆಯಲಿದೆ.
ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ರಾಜಸ್ಥಾನದಲ್ಲಿ ಹಾಲಿ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಕಾಂಗ್ರೆಸ್ನಲ್ಲಿನ ಗೆಹ್ಲೋಟ್-ಸಚಿನ್ ಪೈಲಟ್ ನಡುವಿನ ಒಡಕು, ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಬಳಸಿಕೊಂಡು ಜಯಗಳಿಸಲು ಬಿಜೆಪಿ ಅವಿರತ ಶ್ರಮ ಪಡುತ್ತಿದೆ.
ಹಿಂದೂಸ್ತಾನ್ ಸಮಾಚಾರ್
