ಬೆಂಗಳೂರು, 19 ನವೆಂಬರ್ (ಹಿ.ಸ):
ಆ್ಯಂಕರ್ :ದೆಹಲಿಯ ಕೆಎನ್ ಕಾಟ್ಜು ಮಾರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಸೆಕ್ಟರ್ 15 ರಲ್ಲಿ ದೆಹಲಿ ಸಾರಿಗೆ ನಿಗಮದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕೆಎನ್ ಕಾಟ್ಜು ಮಾರ್ಗ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಲೆಕ್ಟ್ರಿಕ್ ಬಸ್ನ ಮುಂಭಾಗದ ಗಾಜು ಪುಡಿಪುಡಿಯಾಗಿದೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಸ್ ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ. ನವೆಂಬರ್ 4 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ಡಿಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಇನ್ನೊಬ್ಬರು ಗಾಯಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್
