ನವದೆಹಲಿ, 1 ಡಿಸೆಂಬರ್(ಹಿ.ಸ):
ಆ್ಯಂಕರ್ :
ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ 19 ಕೆಜಿಯ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 21 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1775.50 ರೂ.ನಿಂದ 1796.50 ರೂ.ಗೆ ಹೆಚ್ಚಳವಾದಂತಾಗಿದೆ.
ಈ ಹಿಂದೆ ನವೆಂಬರ್ 16 ರಂದು ಅದರ ಬೆಲೆ ಕಡಿತಗೊಂಡು 1775.50 ರೂ. ಆಗಿತ್ತು. ಇಂದಿನಿಂದ ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1749 ರೂ., ಕೋಲ್ಕತ್ತಾದಲ್ಲಿ 1885.50 ರೂ., ಚೆನ್ನೈನಲ್ಲಿ 1968.50 ರೂ. ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯಲ್ಲಿನ ಹೆಚ್ಚಳವು ವಿಶೇಷವಾಗಿ ರೆಸ್ಟೋರೆಂಟ್ ಅಥವಾ ಆಹಾರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ.
14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು.
ಹಿಂದೂಸ್ತಾನ್ ಸಮಾಚಾರ್
