
ಡುಂಗರ್ ಪುರ,16 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ರಾಜಸ್ಥಾನದ ಡುಂಗರ್ಪುರ ಜಿಲ್ಲೆಯಲ್ಲಿ ಟ್ರಕ್ ಮತ್ತು ಮಲ್ಟಿ ಯುಟಿಲಿಟಿ ವಾಹನದ ನಡುವೆ ಡಿಕ್ಕಿ ಸಂಭವಿಸಿ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೆಹಲಿ-ಮುಂಬೈ ರಾಷ್ಟ್ರೀಯ ಹೆದ್ದಾರಿಯ ರತನ್ಪುರ ಗಡಿಯ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಲ್ಲಾ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು, ತೀವ್ರವಾಗಿ ಗಾಯಗೊಂಡ ಮೂವರನ್ನು ಡುಂಗರ್ಪುರಕ್ಕೆ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿ ಹೇಳಿದರು.
ಪೊಲೀಸರ ಪ್ರಕಾರ, ಟ್ರಕ್ ಅದರ ಬ್ರೇಕ್ ವಿಫಲವಾದ ನಂತರ 13 ಜನರಿಗೆ ಕುಳಿತುಕೊಳ್ಳುವ ಸಾಮರ್ಥ್ಯವಿರುವ ಫೋರ್ಸ್ ಟ್ರಾಕ್ಸ್ ಕ್ರೂಸರ್- ಮಲ್ಟಿ-ಯುಟಿಲಿಟಿ ವೆಹಿಕಲ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಎಂಯುವಿ ಪಲ್ಟಿಯಾಗಿದೆ ಎಂದು ಅವರು ಹೇಳಿದರು.
ಡುಂಗರ್ಪುರದಿಂದ ಅಹಮದಾಬಾದ್ಗೆ ತೆರಳುತ್ತಿದ್ದ ವಾಹನದಲ್ಲಿ 21 ಜನರು ಪ್ರಯಾಣಿಸುತ್ತಿದ್ದರು, ಕೆಲವರು ಛಾವಣಿಯ ಮೇಲೆ ಕುಳಿತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಚಾಲಕ ಕೂಡ ಸಾವನ್ನಪ್ಪಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
