
ನವದೆಹಲಿ,13ನವೆಂಬರ್ (ಹಿ.ಸ):
ಆ್ಯಂಕರ್ :ಛತ್ತೀಸ್ ಗಢ ಮತ್ತು ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಛತ್ತೀಸ್ ಗಢದ ಮುಂಗೇಲಿ ಜಿಲ್ಲೆಯ ಜಮ್ಕುಹಿ ಗ್ರಾಮ ಮತ್ತು ಮಹಾಸಮುಂದ್ ಜಿಲ್ಲೆಯ ಬೆಮ್ಚಾ ಭಾಥಾ ಮೈದಾನದಲ್ಲಿ ಬಿಜೆಪಿಯ ಹಿರಿಯ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ ಇಂದು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅದೇ ಸಮಯದಲ್ಲಿ, ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮುಖ್ಯಮಂತ್ರಿ ಭೂಪೇಶ್ ಬಘೇಲ್ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನಾಳೆ ರಾಯ್ಪುರಕ್ಕೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಶುಕ್ರವಾರ ಬೆಮೆತಾರಾಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಎರಡನೇ ಹಂತದಲ್ಲಿ ರಾಜ್ಯದ ೭೦ ವಿಧಾನಸಭಾ ಕ್ಷೇತ್ರಗಳಿಗೆ ಇದೇ ತಿಂಗಳ ೧೭ರಂದು ಮತದಾನ ನಡೆಯಲಿದೆ. ಮಧ್ಯಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಸಾರ್ವಜನಿಕ ಸಭೆಗಳೊಂದಿಗೆ ಚುನಾವಣಾ ಪ್ರಚಾರ ಮತ್ತಷ್ಟು ಚುರುಕುಗೊಂಡಿದೆ. ಮಧ್ಯಪ್ರದೇಶದಲ್ಲಿ ಇದೇ ತಿಂಗಳ ೧೭ರಂದು ಮತದಾನ ನಡೆಯಲಿದೆ. ೨೩೦ ವಿಧಾನಸಭಾ ಸ್ಥಾನಗಳಿಗೆ ೨,೫೩೩ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
