
ನವದಹೆಲಿ, 24 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -೨, ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಒಳಾಂಗಣ ವಿನ್ಯಾಸಕ್ಕಾಗಿ ೨೦೨೩ ರ ವಿಶ್ವ ವಿಶೇಷ ಪ್ರಶಸ್ತಿಯನ್ನು ಪಡೆದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಜನರನ್ನು ಅಭಿನಂದಿಸಿದ್ದಾರೆ. ಟರ್ಮಿನಲ್ ಕಟ್ಟಡದ ಉದ್ಘಾಟನಾ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪ್ರಧಾನಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -೨,ರೋಮಾಂಚಕ ನಗರ ಬೆಂಗಳೂರಿಗೆ ಹೆಬ್ಬಾಗಿಲು ಮಾತ್ರವಲ್ಲ, ವಾಸ್ತುಶಿಲ್ಪದ ಪ್ರತಿಭೆಯ ಪ್ರದರ್ಶನವಾಗಿದೆ ಎಂದು ಹೇಳಿದ್ದಾರೆ. ಈ ಸಾಧನೆಯು ವಿಶ್ವದರ್ಜೆಯ ಮೂಲಸೌಕರ್ಯವನ್ನು ಕಲಾತ್ಮಕ ಸೌಂದರ್ಯದೊಂದಿಗೆ ಸಂಯೋಜಿಸುವಲ್ಲಿ ದೇಶದ ಬೆಳೆಯುತ್ತಿರುವ ಪರಾಕ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
