ವಿಶಾಖಪಟ್ಟಣಂ , 20ನವೆಂಬರ್ (ಹಿ.ಸ):
ಆ್ಯಂಕರ್ :ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 40 ಮೀನುಗಾರಿಕಾ ಹಡಗುಗಳು ಸುಟ್ಟು ಭಸ್ಮವಾಗಿವೆ. ರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ ವ್ಯಾಪಿಸಿತ್ತು.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ತಕ್ಷಣವೇ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಪರೀತ ಶಾಖದ ಕಾರಣ ಬೋಟ್ನಲ್ಲಿ ಇರಿಸಲಾಗಿದ್ದ ಎಲ್ಪಿಜಿ ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ಬೆಂಕಿ ಹರಡಲು ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಯಾವುದೇ ಪ್ರಾಣಹಾನಿ ಅಥವಾ ಗಾಯದ ವರದಿಯಾಗಿಲ್ಲ.
ಹಿಂದೂಸ್ತಾನ್ ಸಮಾಚಾರ್
