ಸೂರತ್, 17 ಡಿಸೆಂಬರ್(ಹಿ.ಸ):
ಆ್ಯಂಕರ್ :
ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಲಿರುವ ಸೂರತ್ ಡೈಮಂಡ್ ಬೋರ್ಸ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಇದಕ್ಕೂ ಮೊದಲು, ಗುಜರಾತ್ನ ಸೂರತ್ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡಕ್ಕೆ ಚಾಲನೆ ನೀಡಿದರು.
ಸೂರತ್ ಡೈಮಂಡ್ ಬೋರ್ಸ್ ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಲಿದೆ. ಸೂರತ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವು 1,200 ದೇಶೀಯ ಪ್ರಯಾಣಿಕರು ಮತ್ತು 600 ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪೀಕ್ ಅವರ್ಗಳಲ್ಲಿ ನಿರ್ವಹಿಸುವ ಸಾಮಥ್ರ್ಯವನ್ನು ಹೊಂದಿದೆ. ಈ ಅವಧಿಯಲ್ಲಿ ಅದರ ಸಾಮಥ್ರ್ಯವನ್ನು 3,000 ಪ್ರಯಾಣಿಕರಿಗೆ ಹೆಚ್ಚಿಸುವ ನಿಬಂಧನೆ ಇದೆ. ಇದರೊಂದಿಗೆ ಈ ವಿಮಾನ ನಿಲ್ದಾಣದ ವಾರ್ಷಿಕ ಪ್ರಯಾಣಿಕರ ನಿರ್ವಹಣಾ ಸಾಮಥ್ರ್ಯ ಈಗ 55 ಲಕ್ಷ ಪ್ರಯಾಣಿಕರಿಗೆ ಏರಿಕೆಯಾಗಿದೆ.
ಹಿಂದೂಸ್ತಾನ್ ಸಮಾಚಾರ್
