ದೆಹಲಿ , 3 ನವೆಂಬರ್ (ಹಿ.ಸ):
ಆ್ಯಂಕರ್ :
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿಂದು ಪ್ರಗತಿ ಮೈದಾನದಲ್ಲಿ ವಿಶ್ವ ಆಹಾರ ಭಾರತ-೨೦೨೩ ಮೇಳ ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಈ ಮೇಳವನ್ನು ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯ ಆಯೋಜಿಸಿದ್ದು, ವಿಶ್ವಕ್ಕೆ ದೇಶೀಯ ಆಹಾರ ಸಂಸ್ಕೃತಿಯನ್ನು ಪರಿಚಯಿಸುವ ಗುರಿ ಹೊಂದಿದೆ. ಈ ಬಗ್ಗೆ ಆಹಾರ ಸಂಸ್ಕರಣಾ ಕಾರ್ಯದರ್ಶಿ ಅನಿತಾ ಪ್ರವೀಣ್ ಮಾಹಿತಿ ನೀಡಿ, ೨೩ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ೧ ಸಾವಿರದ ೨೦೦ ಮಳಿಗೆಯಲ್ಲಿ ಆಹಾರ ಪ್ರದರ್ಶನ ಇರಲಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
