ದೆಹಲಿ, 18 ಜನವರಿ(ಹಿ.ಸ):
ಆ್ಯಂಕರ್ :
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ’ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ದೇಶದಾದ್ಯಂತ ನಡೆಸಲಾಗುತ್ತಿದ್ದು, ಈ ಯೋಜನೆಗಳ ಪ್ರಯೋಜನಗಳು ಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಕಾಲಮಿತಿಯಲ್ಲಿ ತಲುಪುವುದನ್ನು ಖಾತ್ರಿಪಡಿಸುವ ಮೂಲಕ ಸರ್ಕಾರದ ಪ್ರಮುಖ ಯೋಜನೆಗಳು ಗರಿಷ್ಠ ಪ್ರಮಾಣದ ಜನರಿಗೆ ತಲುಪಿಸಲು ಪ್ರಯತ್ನಿಸುತ್ತಿದೆ.
ಹಿಂದೂಸ್ತಾನ್ ಸಮಾಚಾರ್
