
ನವದೆಹಲಿ,10ನವೆಂಬರ್ (ಹಿ.ಸ):
ಆ್ಯಂಕರ್ :ಸಂಸತ್ತಿನ ಚಳಿಗಾಲದ ಅಧಿವೇಶನ ಮುಂದಿನ ತಿಂಗಳ ೪ ರಿಂದ ಆರಂಭವಾಗುವುದು ಡಿಸೆಂಬರ್ ೨೨ ರವರೆಗೆ ಮುಂದುವರಿಯುವ ಅಧಿವೇಶನ ಒಟ್ಟು ೧೫ ಬಾರಿ ಸಮಾವೇಶಗೊಳ್ಳಲಿದೆ. ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ಸಾಮಾಜಿಕ ಮಾಧ್ಯಮದ ಮೂಲಕ ಈ ಮಾಹಿತಿ ನೀಡಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಸಕಾರ ಶಾಸಕಾಂಗ ಕಲಾಪದ ಬಗ್ಗೆ ಹಾಗೂ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ. ಇದಕ್ಕೆ ಮೊದಲು ಸೆಪ್ಟೆಂಬರ್ನಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ನಡೆದು, ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ನೀಡಿತ್ತು.
ಹಿಂದೂಸ್ತಾನ್ ಸಮಾಚಾರ್
