
ಕೋಲ್ಕತ್ತಾ,26ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಬಹುಕೋಟಿ ಪಡಿತರ ವಿತರಣೆ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರ ನಿವಾಸದಲ್ಲಿ ಇಂದು ಮುಂಜಾನೆ ಶೋಧ ಆರಂಭಿಸಿದ್ದಾರೆ.
ಕೋಲ್ಕತ್ತಾದ ಸಾಲ್ಟ್ ಲೇಕ್ ಪ್ರದೇಶದಲ್ಲಿ ಪ್ರಸ್ತುತ ರಾಜ್ಯ ಅರಣ್ಯ ಸಚಿವರಾಗಿರುವ ಮಲ್ಲಿಕ್ ಅವರಿಗೆ ಸೇರಿದ ಎರಡು ಫ್ಲಾಟ್ಗಳ ಮೇಲೆ ಕೇಂದ್ರೀಯ ಪಡೆಗಳ ತಂಡದಿಂದ ಇಡಿ ದಾಳಿ ನಡೆಸಲಾಗಿದೆ ಎಂದು ಅವರು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
