ನವದೆಹಲಿ, 31ಅಕ್ಟೋಬರ್ (ಹಿ.ಸ):
ಆ್ಯಂಕರ್ :
ದೇಶದ ಮೊದಲ ಉಪಪ್ರಧಾನಿ ಹಾಗೂ ಗೃಹ ಸಚಿವರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ, ಅವರಿಗೆ ನಮನ ಸಲ್ಲಿಸಿದ್ದಾರೆ.
ಸರ್ದಾರ್ ಪಟೇಲ್ ಜಯಂತಿಯ ದಿನವಾದ ಇಂದು ದೇಶವನ್ನು ರೂಪಿಸಿದ ಅವರ ಮುತ್ಸದ್ದಿತನ, ಸಮರ್ಪಣಾಭಾವವನ್ನು ದೇಶ ಸ್ಮರಿಸುತ್ತದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಏಕತೆ ಕುರಿತ ಅವರ ಬದ್ಧತೆ ಜನರಿಗೆ ಮಾರ್ಗದರ್ಶನವಾಗಿದ್ದು, ದೇಶ ಎಂದಿಗೂ ಅವರ ಸೇವೆಯನ್ನು ಮರೆಯುವುದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
