
ಉತ್ತರಕಾಶಿ,29 ನವೆಂಬರ್ (ಹಿ.ಸ):
ಆ್ಯಂಕರ್ :
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ ಬೆನ್ನಲ್ಲೇ ಎಲ್ಲ ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೇ ಕಾರ್ಮಿಕರು ಗುಣಮುಖರಾಗಿ ಮನೆಗೆ ಮರಳುವ ವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿ ಕಾರ್ಮಿಕರನ್ನು ಎನ್ಡಿಆರ್ಎಫ್ ಸಿಬ್ಬಂದಿ 17 ದಿನಗಳ ಕಾರ್ಯಾಚರಣೆ ಬಳಿಕ ನಿನ್ನೆ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್
