ನವದೆಹಲಿ,13ನವೆಂಬರ್ (ಹಿ.ಸ):
ಆ್ಯಂಕರ್ :
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಸಿಲುಕಿದ್ದ ಸುಮಾರು ೪೦ ಕಾರ್ಮಿಕರನ್ನು ರಕ್ಷಿಸಲು ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಗಳು ಪ್ರಗತಿಯಲ್ಲಿವೆ. ಸುರಂಗದಿಂದ ಅವಶೇಷಗಳನ್ನು ತೆಗೆದುಹಾಕುವ ಕಾರ್ಯ ಭರದಿಂದ ಸಾಗಿದೆ. ಸುರಂಗದೊಳಗಿನ ಎಲ್ಲಾ ಕಾರ್ಮಿಕರು ಸುರಕ್ಷಿತರಾಗಿದ್ದಾರೆ ಮತ್ತು ಅವರಿಗೆ ಪೈಪ್ ಗಳ ಮೂಲಕ ಸಾಕಷ್ಟು ಆಹಾರ ಮತ್ತು ಆಮ್ಲಜನಕವನ್ನು ಒದಗಿಸಲಾಗುತ್ತಿದೆ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ. ಸುರಂಗದಲ್ಲಿ ಸಿಲುಕಿರುವ ಹೆಚ್ಚಿನ ಜನರು ಜಾರ್ಖಂಡ್, ಉತ್ತರ ಪ್ರದೇಶ, ಒರಿಶಾ, ಬಿಹಾರ ಮತ್ತು ಪಶ್ಚಿಮ ಬಂಗಾಳದ ನಿವಾಸಿಗಳಾಗಿದ್ದಾರೆ. ಹೃಷಿಕೇಶ್ – ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ಹವಾಮಾನಕ್ಕೂ ಹೊಂದುವಂತಹ ರಸ್ತೆಯನ್ನು ರಚಿಸಲು ಸುರಂಗವನ್ನು ನಿರ್ಮಿಸಲಾಗುತ್ತಿದೆ ಎಂದು ವರದಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್
