ದೆಹಲಿ , 15ನವೆಂಬರ್ (ಹಿ.ಸ):
ಆ್ಯಂಕರ್ :
ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡ ಅವರ ಜನ್ಮ ಜಯಂತಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಬಿರ್ಸಾ ಮುಂಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಪುಷ್ಪ ನಮನ ಸಲ್ಲಿಸಿದರು. ಸಂಸತ್ ಭವನದ ಆವರಣದಲ್ಲಿ ನಡೆದ ಬುಡಕಟ್ಟು ಜನಾಂಗದ ನೃತ್ಯ ಪ್ರದರ್ಶನದಲ್ಲಿ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಭಾಗಿಯಾಗಿದ್ದರು.
ಹಿಂದೂಸ್ತಾನ್ ಸಮಾಚಾರ್
