ಶಿಮ್ಲಾ, 08 ಆಗಸ್ಟ್ (ಹಿ.ಸ.) :
ಆ್ಯಂಕರ್ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಭಂಜ್‌ರಾದು ಶಹ್ವಾ–ಭಡಕ್ವಾಸ್ ರಸ್ತೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಸೇರಿದ್ದಾರೆ.
ಚಂಬಾ ಜಿಲ್ಲಾಕೇಂದ್ರದಿಂದ ಹಿಂದಿರುಗುತ್ತಿದ್ದ ವೇಳೆ, ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಕಾರು ಸಂಪೂರ್ಣ ನಾಶವಾಗಿದೆ.
ಮೃತರನ್ನು ರಾಜೇಶ್ ಕುಮಾರ್ (40), ಪತ್ನಿ ಹನ್ಸೊ (36), ಮಗಳು ಆರತಿ (17), ಮಗ ದೀಪಕ್ (15), ರಾಕೇಶ್ ಕುಮಾರ್ (44) ಮತ್ತು ಹೆಮ್ ಪಾಲ್ (37) ಎಂದು ಗುರುತಿಸಲಾಗಿದೆ.
ಪೊಲೀಸರು ಸ್ಥಳೀಯರ ಸಹಾಯದಿಂದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
