ದೆಹಲಿ, 13 ಡಿಸೆಂಬರ್(ಹಿ.ಸ):
ಆ್ಯಂಕರ್ :
ಸಂಸತ್ ಮೇಲೆ ದಾಳಿ ನಡೆದು ಇಂದಿಗೆ 22 ವರ್ಷ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ , ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಗಣ್ಯರು ಬುಧವಾರ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಸಂಘಟನೆಗಳ ಭಯೋತ್ಪಾದಕರು ಡಿಸೆಂಬರ್ 13, 2001 ರಂದು ಸಂಸತ್ತಿನ ಸಂಕೀರ್ಣದ ಮೇಲೆ ದಾಳಿ ಮಾಡಿದ್ದು, ಈ ದಾಳಿಯಲ್ಲಿ ಒಂಬತ್ತು ಜನರು ಸಾವಿಗೀಡಾಗಿದ್ದಾರೆ. ದಾಳಿ ನಡೆಸಿದ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.
ಹಿಂದೂಸ್ತಾನ್ ಸಮಾಚಾರ್
