ಗುರುಗ್ರಾಮ,9 ನವೆಂಬರ್ (ಹಿ.ಸ):
ಆ್ಯಂಕರ್ :ದೆಹಲಿ-ಜೈಪುರ್ ಹೆದ್ದಾರಿಯಲ್ಲಿ ಬರುತ್ತಿದ್ದ ಸ್ಲೀಪರ್ ಬಸ್ ಹೊತ್ತಿ ಉರಿದಿದ್ದು, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾಗಿದ್ದಾರೆ. ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಬಸ್ ರಾಜಸ್ಥಾನದಿಂದ ದೆಹಲಿಗೆ ಬರುತ್ತಿರುವಾಗ ಘಟನೆ ನಡೆದಿದೆ. ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ಘಟನೆ ಸಂಭವಿಸಿದೆ.
ಎಆರ್ 01 ಕೆ 7707 ನೋಂದಣಿ ಸಂಖ್ಯೆಯ ಸ್ಲೀಪರ್ ಬಸ್ಗೆ ಕ್ಯಾರೇಜ್ವೇಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿಯನ್ನು ಪಡೆದ ನಂತರ ಮೂರು ಅಗ್ನಿಶಾಮಕ ಇಂಜಿನ್ಗಳು ಸ್ಥಳಕ್ಕೆ ಧಾವಿಸಿತ್ತು. ಏಳು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗುರುಗ್ರಾಮ್ನ ಸಿವಿಲ್ ಆಸ್ಪತ್ರೆಯ ಡಾ.ಮಾನವ್ ಖಚಿತಪಡಿಸಿದ್ದಾರೆ.
ಎಲ್ಲಾ ಗಾಯಾಳುಗಳು 30 ರಿಂದ 50 ರಷ್ಟು ಸುಟ್ಟಗಾಯಗಳನ್ನು ಅನುಭವಿಸಿದ್ದಾರೆ ಆದರೆ ಆರೋಗ್ಯ ಸ್ಥಿರವಾಗಿದೆ ಎಂದು ಅವರು ಹೇಳಿದರು. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್
