ಲಡಾಖ್,30ಜನವರಿ(ಹಿ.ಸ):
ಆ್ಯಂಕರ್ : ಲಡಾಖ್ ನ ಲೇಹ್ ನಲ್ಲಿ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ. ಭೂಕಂಪದ 5 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿದೆಯೇ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಭೂಕಂಪವು ಲಡಾಖ್ ಪ್ರದೇಶದಲ್ಲಿ ಬೆಳಗ್ಗೆ 5.39 ಕ್ಕೆ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು 35.27 ರ ಅಕ್ಷಾಂಶ ಮತ್ತು 75.40 ರ ರೇಖಾಂಶದಲ್ಲಿದೆ. ಸದ್ಯ ಈ ಭೂಕಂಪದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ.
