ನವದೆಹಲಿ,28ಅಕ್ಟೋಬರ್ (ಹಿ.ಸ):
ಆ್ಯಂಕರ್ :ಸರ್ಕಾರಿ ವಲಯದ ಉದ್ಯೋಗಕ್ಕೆ ಹೊಸದಾಗಿ ಸೇರ್ಪಡೆಗೊಂಡ 51 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಿದರು. ದೇಶಾದ್ಯಂತ 37 ಸ್ಥಳಗಳಲ್ಲಿ ರೋಜ್ಗಾರ್ ಮೇಳ ನಡೆದಿದೆ. ನೇಮಕಾತಿ ಪತ್ರಗಳನ್ನು ವಿತರಿಸಿದ ಮಾತನಾಡಿದ ಪ್ರಧಾನಿ ಮೋದಿ ಅವರು, ಕಳೆದ ವರ್ಷ ಅಕ್ಟೋಬರ್ನಲ್ಲಿ ರೋಜ್ಗಾರ್ ಮೇಳವನ್ನು ಪ್ರಾರಂಭಿಸಲಾಯಿತು. ಕೇಂದ್ರ ಸರ್ಕಾರ, ಎನ್ಡಿಎ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ‘ರೋಜ್ಗಾರ್ ಮೇಳ’ ಆಯೋಜಿಸಲಾಗುತ್ತಿದೆ. ಇದುವರೆಗೆ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಪತ್ರ ನೀಡಲಾಗಿದೆ. ಇಂದು 50,000 ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ದೀಪಾವಳಿಗೆ ಸ್ವಲ್ಪ ಸಮಯವಿದೆ, ಆದರೆ ಈ ಸಂದರ್ಭವು ನೇಮಕಾತಿ ಪತ್ರಗಳನ್ನು ಸ್ವೀಕರಿಸುವ 50,000 ಮಂದಿಯ ಕುಟುಂಬಗಳಿಗೆ ದೀಪಾವಳಿಗಿಂತ ಕಡಿಮೆಯೇನಲ್ಲ ಎಂದು ಬಣ್ಣಿಸಿದರು.
ಹಿಂದೂಸ್ತಾನ್ ಸಮಾಚಾರ್
