ನವದೆಹಲಿ, 3 ಫೆಬ್ರವರಿ:
ಆ್ಯಂಕರ್ : ಸಾರ್ವಜನಿಕ ಆಡಳಿತದಲ್ಲಿ ಉತ್ಕೃಷ್ಟತೆಗಾಗಿ ೨೦೨೩ರ ಪ್ರಧಾನ ಮಂತ್ರಿಗಳ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಈ ವರ್ಷದ ಫೆಬ್ರವರಿ ೧೨ ರವರೆಗೆ ಸರ್ಕಾರ ವಿಸ್ತರಿಸಿದೆ.
ಮೊದಲು ನಾಮನಿರ್ದೇಶನಗಳ ಕೊನೆಯ ದಿನಾಂಕ ಜನವರಿ ೩೧ ಆಗಿತ್ತು. ಕೇಂದ್ರ ಮತ್ತು ರಾಜ್ಯದಲ್ಲಿರುವ ಜಿಲ್ಲೆಗಳು ಮತ್ತು ಸಂಸ್ಥೆಗಳು ಮಾಡಿದ ಅಸಾಧಾರಣ ಮತ್ತು ನವೀನ ಕಾರ್ಯಗಳನ್ನು ಗುರುತಿಸಲು ಮತ್ತು ಪುರಸ್ಕರಿಸಲು ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.
ವಿವಿಧ ಸಂಸ್ಥೆಗಳಿಂದ ಬಂದ ಮನವಿಗಳ ಮೇರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
