ಚೆನ್ನೈ, 4 ಮಾರ್ಚ್ : ಆ್ಯಂಕರ್:: ಇಂದು ಪ್ರಧಾನಿ ಮೋದಿಯವರು ತಮಿಳುನಾಡಿಗೆ ಭೇಟಿ ನೀಡುತ್ತಿರುವ ಬೆನ್ನಲ್ಲೇ 2 ಶಾಲೆಗಳಿಗೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.
ತಮಿಳುನಾಡಿನ ಕಾಂಚಿಪುರಂ ಮತ್ತು ಕೋಯಿಮತ್ತೂರು ಜಿಲ್ಲೆಯ ಎರಡು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ತಡರಾತ್ರಿ ಅನಾಮಧೇಯ ವ್ಯಕ್ತಿಯೊಬ್ಬರು ಮೇಲ್ ಮಾಡಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದಲು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಆದರೂ ಪೊಲೀಸರು ಸೇರಿದಂತೆ ಭದ್ರತಾ ಇಲಾಖೆಯವರು ಫುಲ್ ಹೈಅಲರ್ಟ್ ಆಗಿ ಇದ್ದಾರೆ ಎಂದು ತಿಳಿದು ಬಂದಿದೆ.
