ನವದೆಹಲಿ, ಆ್ಯಂಕರ್:ಲೋಕಸಭಾ ಚುನಾವಣೆಯ ಎರಡನೇ ಹಂತ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ಒಂದಾದ ನಂತರ ಒಂದರಂತೆ ರಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸುವ ಮೂಲಕ ಮತದಾರರನ್ನು ಸೆಳೆಯಲು ಸರ್ವಪ್ರಯತ್ನ ಮಾಡುತ್ತಿದ್ದಾರೆ.
ಈ ಮಧ್ಯೆ ಅಭ್ಯರ್ಥಿಗಳು ನಾಮಪ;ತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದೆ.
ಕೇರಳದಲ್ಲಿ ೨೦, ಕರ್ನಾಟಕದಲ್ಲಿ ೧೪, ರಾಜಸ್ಥಾನದಲ್ಲಿ ೧೩, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ತಲಾ ಎಂಟು, ಮಧ್ಯಪ್ರದೇಶದಲ್ಲಿ ಏಳು, ಅಸ್ಸಾಂ ಮತ್ತು ಬಿಹಾರದಲ್ಲಿ ತಲಾ ಐದು, ಪಶ್ಚಿಮ ಬಂಗಾಳ ಮತ್ತು ಛತ್ತೀಸ್ಗಢದಲ್ಲಿ ತಲಾ ಮೂರು ಮತ್ತು ತ್ರಿಪುರ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಂದು ಸ್ಥಾನಗಳಿಗಾಗಿ ಈ ತಿಂಗಳ ೨೬ ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
