ದೆಹಲಿ,20ಅಕ್ಟೋಬರ್ :
ಆ್ಯಂಕರ್ :
ಕೆಲವು ದಿನಗಳಿಂದ ದಕ್ಷಿಣ, ಮಧ್ಯ ಮತ್ತು ವಾಯುವ್ಯ ಭಾರತದ ಹಲವಾರು ಪ್ರದೇಶಗಳಲ್ಲಿ ಮಳೆಯಾಗಿದ್ದು ಇದು ತಾಪಮಾನವನ್ನು ಕಡಿಮೆ ಮಾಡಿದೆ. ವಿಶೇಷವಾಗಿ ದೆಹಲಿ ಮತ್ತು ಪಂಜಾಬ್ ಮತ್ತು ಹರ್ಯಾಣದ ಕೆಲವು ಪ್ರದೇಶಗಳಲ್ಲಿ ಈಗ ಉಷ್ಣತೆ ಕಡಿಮೆ ಆಗಿದೆ. ಭಾರತದ ಹವಾಮಾನ ಇಲಾಖೆ ಪ್ರಕಾರ ಮುಂದಿನ ಕೆಲವು ದಿನಗಳಲ್ಲಿ ದೇಶದ ವಾಯುವ್ಯ ಭಾಗವು ಒಣ ಹವಾಮಾನವನ್ನು ಅನುಭವಿಸುತ್ತದೆ ಎಂದು ಹೇಳಿದೆ. ಅದೇ ವೇಳೆ ದಕ್ಷಿಣದ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡಿನಲ್ಲಿ ಮಳೆ ಕಾಣಬಹುದು.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದಲ್ಲಿಯೂ ಇದೇ ರೀತಿಯ ವಾತಾವರಣ ಇರಲಿದೆ.
ಉಪ-ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ, ಗೋವಾ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಿಂಚು,ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನ ಇರಲಿದೆ.
