ನವದೆಹಲಿ, 23 ಮಾರ್ಚ್
ಆ್ಯಂಕರ್:ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಈ ತಿಂಗಳ ೨೮ ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ, ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ. ಹತ್ತು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಈ ಮಧ್ಯೆ, ಬಿಜೆಪಿ ಹಿರಿಯ ನಾಯಕಿ ಸ್ಮೃತಿ ಇರಾನಿ, ಕೇಜ್ರಿವಾಲ್, ಆಡಳಿತಾತ್ಮಕ ಅಧಿಕಾರವನ್ನು ಭ್ರಷ್ಟಾಚಾರಕ್ಕಾಗಿ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ, ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ದೆಹಲಿಯ ಸಚಿವೆ ಮತ್ತು ಆಪ್ ನಾಯಕಿ ಆತಿಶಿ ಹೇಳಿದ್ದಾರೆ. ಅವರು ರಾಜೀನಾಮೆ ನೀಡಲು ಯಾವುದೇ ಸಾಂವಿಧಾನಿಕ ನಿಬಂಧನೆಯ ಅಗತ್ಯವಿಲ್ಲ ಎಂದು ಹೇಳಿದರು. ಸಂಪೂರ್ಣ ದೆಹಲಿ ಕ್ಯಾಬಿನೆಟ್ ಅಖಂಡವಾಗಿದ್ದು, ಪ್ರತಿಯೊಂದು ಇಲಾಖೆಯೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
ಹಿಂ
