ಬೆಂಗಳೂರು, 23 ಫೆಬ್ರವರಿ :
ಕೇಂದ್ರ ಚುನಾವಣಾ ಆಯೋಗದ ಪೂರ್ಣ ತಂಡ ಇಂದಿನಿಂದ ಎರಡು ದಿನ ದಕ್ಷಿಣ ಭಾರತ ರಾಜ್ಯಗಳಿಗೆ ಭೇಟಿ ನೀಡಲಿದೆ.
ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಈ ತಂಡ ಸಭೆಗಳನ್ನು ನಡೆಸಲಿದ್ದು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೂ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದೆ.
ನಾಳೆ, ೨೪ನೇ ತಾರೀಖಿನಂದು ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಸಭೆ ನಿಗದಿಯಾಗಿದೆ. ಶನಿವಾರ ಸುದ್ದಿಗೋಷ್ಠಿಯೊಂದಿಗೆ ಚುನಾವಣಾ ಆಯೋಗದ ಅಧಿಕಾರಿಗಳ ತಂಡದ ಈ ಭೇಟಿ ಪೂರ್ಣಗೊಳ್ಳಲಿದೆ.
